'ಭಿತ್ತಿ' ಕೃತಿಯು ಕನ್ನಡದ ಶ್ರೇಷ್ಠ ಕಾದಂಬರಿಕಾರರಾದ ಎಸ್. ಎಲ್. ಭೈರಪ್ಪನವರ ಆತ್ಮಕತೆ.
ಬೆನ್ನು ಹತ್ತಿದ ಬಡತನ, ಜವಾಬ್ದಾರಿಯರಿಯದ ಅಪ್ಪ,ನೆರವು ನೀಡದ ಬಂಧುಗಳು ಹಾಗೂ ಇತರರ ಕೊಂಕು ನುಡಿಗಳ ನಡುವೆ ಭೈರಪ್ಪನವರ ಬಾಲ್ಯದ ಬದುಕು ತೆರೆದುಕೊಳ್ಳುತ್ತದೆ. ಏಳು ಮಕ್ಕಳ ದೊಡ್ಡ ಕುಟುಂಬಕ್ಕೆ ತಾಯಿಯ ದುಡಿಮೆಯೊಂದೇ ಆಧಾರ. ಗಂಡಸಿಗೆ ಸರಿಸಮವಾಗಿ ದುಡಿಯುತ್ತ ಕುಟುಂಬವನ್ನು ಸಾಕುತ್ತಿರುವ ತಾಯಿಯನ್ನು ಕಂಡರೆ ಭೈರಪ್ಪನವರಿಗೆ ಎಲ್ಲಿಲ್ಲದ ಗೌರವ ಮತ್ತು ಅಭಿಮಾನ. ಆ ಅಭಿಮಾನ ಮತ್ತು ಗೌರವ ಅಮ್ಮನ ಸಾವಿನ ನಂ...