ಪ್ರಖ್ಯಾತ ಲೇಖಕರಾದ ಎಸ್. ಎಲ್. ಭೈರಪ್ಪನವರ 'ನಿರಾಕರಣ' ಕಾದಂಬರಿಯು ಸಂಸಾರವನ್ನು ನಿರಾಕರಿಸಿ ವ್ಯಕ್ತಿ ಸಮಾಜದ ಎಲ್ಲ ಸಂಬಂಧಗಳನ್ನೂ ಕಳಚಿಕೊಂಡು ಒಂಟಿಯಾಗುವ, ವಿರಕ್ತ ಜೀವನವನ್ನು ಬೋಧಿಸುವ ಭಾರತೀಯ ತತ್ತ್ವದ ಮುಖವೊಂದನ್ನು ವಿಶ್ಲೇಷಿಸುವ ಯತ್ನವಾಗಿದೆ.ಈ ಕಾದಂಬರಿಯ ನಾಯಕ ನರಹರಿಯ ವಾಸ್ತವ ಹಾಗೂ ಅದರ್ಶ ಜೀವನದ ನಿರಂತರ ಭ್ರಮಣೆಯೇ ಇಲ್ಲಿಯ ಕಥಾವಸ್ತು. ವ್ಯಕ್ತಿ ಹಾಗೂ ಸಮಾಜಕ್ಕಿರುವ ಅಭೇದ್ಯ ಸಂಬಂಧವನ್ನು ಕಾದಂಬರಿ ಪ್ರತಿಪಾದಿಸುತ್ತದೆ.
ಐದು ಪುಟ್ಟ ಮಕ್ಕಳನ್ನು ಸಾಕಲು ಮನೆಯಲ್ಲಿ ಹೆಣ್ಣು ದಿಕ್ಕ...