ಎಸ್. ಎಲ್. ಭೈರಪ್ಪನವರ ಗೃಹಭಂಗವು ಪ್ರಸಿದ್ಧ ಮತ್ತು ವಿಮರ್ಶಕರಿಂದ ಮೆಚ್ಚುಗೆಗೆ ಪಾತ್ರವಾದ ಕಾದಂಬರಿ. ಈ ಕಾದಂಬರಿಯು ತಿಪಟೂರು, ಚೆನ್ನರಾಯಪಟ್ಟಣ ತಾಲ್ಲೂಕುಗಳನ್ನೊಳಗೊಂಡ ಭಾಗದ ಪ್ರಾದೇಶಿಕ ಹಿನ್ನೆಲೆ ಹೊಂದಿದೆ. 'ಗೃಹಭಂಗ'ವು ಯಾವುದೇ ಬೌದ್ಧಿಕ ಜಿಜ್ಞಾಸೆಯ, ತಾತ್ತ್ವಿಕ, ವೈಚಾರಿಕ ವಿಶ್ಲೇಷಣೆಗಳ ಹಂಗಿಲ್ಲದೆ, ಬದುಕನ್ನು ಕೇವಲ ಬದುಕಾಗಿ ನೋಡುವ ಸಾಕ್ಷಿಪ್ರಜ್ಞೆಯ ಸೃಜನಾತ್ಮಕ ಕೃತಿ. ಈ ಕಾದಂಬರಿಯು ಯಾವುದೇ ಸಿದ್ಧಾಂತದ ವ್ಯಾಖ್ಯೆಗೂ ನಿಲುಕದ ಬದುಕಿನ ಒಳನೋಟಗಳ ಸಂಕೀರ್ಣ ವಿನ್ಯಾಸಗಳ ದರ್ಶನ ಮಾಡ...