ಸೃಷ್ಟಿಶಕ್ತಿಯಿಂದ ವಿಜ್ರಂಭಿಸುವ ಜೇವನಪ್ರವೃತ್ತಿ ಮತ್ತು ಆ ಶಕ್ತಿಯನ್ನು ಹತ್ತಿಕ್ಕುವ ಜೀವನಪರಿಸ್ಥಿತಿಯ ತಾಕಲಾಟವೇ 'ಜಲಪಾತ'ದ ಕಥಾವಸ್ತು. ನೀರು ಮತ್ತು ಮಣ್ಣಿನ ಶಕ್ತಿಯಿಂದ ಕಂಗೊಳಿಸುವ ವನಶ್ರೀ, ಗಂಡು ಹೆಣ್ಣುಗಳ ಮೂಲಶಕ್ತಿಯಾದ ಜೀವನಮಿಕಾಸ, ಮತ್ತು ಭೌದ್ಧಿಕಸ್ತರದಲ್ಲಿ ಆವಿರ್ಭವಿಸುವ ಕಲಾಸೌನ್ದರ್ಯ - ಇವು ಮೂರು, ವಿವಿಧಸ್ತರಗಳಲ್ಲಿ ಪ್ರಕಟವಾಗುವ ಒಂದೇ ಮೂಲಶಕ್ತಿ ಎಂಬುದನ್ನು ಕಾದಂಬರಿಯ ಅಂಗಗಳಾಗಿ ಬೆಳೆದಿರುವ ಪ್ರತೀಕಗಳು ಎತ್ತಿತೋರಿಸುತ್ತವೆ. ಸಂಯೋಗದ ಕರೆ ಮತ್ತು ಕ್ರಿಯೆ, ಗರ್ಭದ ವಿಕಾಸ...